ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮಗುಚಿ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆಯೊಂದು ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಅಣಿಯೂರು ನಿವಾಸಿ ಪ್ರದೀಪ್ ಗೌಡ (27) ಎಂದು ಗುರುತಿಸಲಾಗಿದೆ.
ಮೃತ ಪ್ರದೀಪ್ ಗೌಡ ಅವರು ಬುಧವಾರ ರಾತ್ರಿ ತಮ್ಮ ಬೈಕಿನಲ್ಲಿ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಚಲಿಸಿ ಮನೆಯೊಂದರ ಗೇಟಿಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಪ್ರದೀಪ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟು ಹೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ.
Post a Comment