ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುಳ್ಯ; 2ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಸುಳ್ಯ; 2ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

 


ಸುಳ್ಯ: ಹೃದಯಾಘಾತದಿಂದ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆಯೊಂದು ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.


ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್‌ ಕೆ.ಸಿ. (7) ಮೃತ ಬಾಲಕ.


ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನು. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು.

ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು.


ಮೃತ ಬಾಲಕ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.


0 Comments

Post a Comment

Post a Comment (0)

Previous Post Next Post