ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಜೈಲುಪಾಲಾಗಿದ್ದು, ಇದೀಗ ಮುರುಘಾ ಮಠದ ಹಾಸ್ಟೆಲ್ನಲ್ಲಿ ವಾಸವಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿರುವ ಗಂಭೀರ ಆರೋಪ ಕೇಳಿಬಂದಿದೆ.
ಚಿತ್ರದುರ್ಗದ ಆರ್ಟಿಐ ಕಾರ್ಯಕರ್ತ ಬಿ.ಎಚ್.ಗೌಡ್ರು ಗಂಭೀರ ಆರೋಪ ಮಾಡಿದ್ದು, ಮುರುಘಾಮಠದ ಹಾಸ್ಟೆಲ್ ನಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿದ್ದಾರೆ.
ನಾಪತ್ತೆಯಾಗಿರುವವರ ಪೈಕಿ 14 ಹೆಣ್ಣು ಹಾಗೂ 8 ಗಂಡು ಮಕ್ಕಳಿದ್ದಾರೆ. ಮಕ್ಕಳ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ.
ಈ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ದಿವ್ಯಪ್ರಭು, ಎಸ್ಪಿ ಕೆ.ಪರಶುರಾಮ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ನಾಪತ್ತೆಯಾಗಿರುವ ಮಕ್ಕಳು ಎಲ್ಲಿದ್ದಾರೆ? ಹೇಗಿದ್ದಾರೆ ಎಂಬ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ದೂರು ನೀಡಿರುವ ಮಕ್ಕಳಲ್ಲದೇ ಇತರ ಅನಾಥ ಮಕ್ಕಳ ಮೇಲೆಯೂ ಶಿವಮೂರ್ತಿ ಮುರುಘಾ ಶರಣ ದೌರ್ಜನ್ಯ ಎಸಗಿರಬಹುದು ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.
إرسال تعليق