ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವಾಹಿತ ಯುವಕ ಪ್ರೇಯಸಿಯೊಂದಿಗೆ ಲಾಡ್ಜ್ ನಲ್ಲಿ ಪತ್ತೆ; ಇಬ್ಬರನ್ನೂ ತರಾಟೆಗೆ ತೆಗೆದುಕೊಂಡ ಪತ್ನಿ

ವಿವಾಹಿತ ಯುವಕ ಪ್ರೇಯಸಿಯೊಂದಿಗೆ ಲಾಡ್ಜ್ ನಲ್ಲಿ ಪತ್ತೆ; ಇಬ್ಬರನ್ನೂ ತರಾಟೆಗೆ ತೆಗೆದುಕೊಂಡ ಪತ್ನಿ

 


ಸುಳ್ಯ: ಮಂಗಳೂರು ಮೂಲದ ವಿವಾಹಿತ ಯುವಕ ಪ್ರೇಯಸಿಯೊಂದಿಗೆ ಸುಳ್ಯದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ನೆಲೆಯಾಗಿದ್ದು,ಈ ವಿಷಯ ತಿಳಿದ ಆತನ ಪತ್ನಿ ಡಿ.೧೧ರಂದು ಸಂಜೆ ಸುಳ್ಯಕ್ಕೆ ಬಂದು ಅವರು ತಂಗಿದ್ದ ಲಾಡ್ಜ್ ಬಳಿ ಬಂದು ಗಲಾಟೆ ಮಾಡಿದ ಘಟನೆಯೊಂದು ವರದಿಯಾಗಿದೆ.

ಲಾಡ್ಜ್ ನಲ್ಲಿದ್ದ ಯುವತಿಯ ಜೊತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಶನ್ ಬಳಿಗೆ ಬಂದು ನಿಂತ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ.


ಈ ಜೋಡಿಯನ್ನು ನೋಡಿದ ಆತನ ಹೆಂಡತಿ ರಸ್ತೆಯಲ್ಲಿ ಗಂಡನನ್ನು ಮತ್ತು ಆ ಯುವತಿಯನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದು, ಗಲಾಟೆ ಉಂಟಾಗಿದೆ.

ಪತಿ ಹಾಗೂ ಮತ್ತವನ ಪ್ರೇಯಸಿಯನ್ನು ರಸ್ತೆಯಲ್ಲಿ ಎಳೆದಾಡಿ, ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾಳೆ‌.

ಪೊಲೀಸರಿಗೆ ವಿಷಯ ತಿಳಿದು ಬಂದು ಮೂವರನ್ನೂ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.


0 تعليقات

إرسال تعليق

Post a Comment (0)

أحدث أقدم