ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

 


ಸುಬ್ರಹ್ಮಣ್ಯ: ಕುಕ್ಕೆ ಸುಬ್ರ ಹ್ಮಣ್ಯಕ್ಕೆ ಆಗಮಿಸಿದ್ದ ಯಾತ್ರಾರ್ಥಿ ಡಿ.6 ರಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆಯೊಂದು ಸಂಭವಿಸಿದೆ.


ಬೆಂಗಳೂರಿನ ಕಸ್ತೂರಿ ನಗರ್‌ಪೈಪ್‌ ಲೈನ್‌ ರೋಡ್‌ ನಿವಾಸಿ ಶಿವಪ್ಪ (60) ಮೃತರು.


ಡಿ. 6ರ ಬೆಳಗ್ಗೆ ಸ್ನಾನಕ್ಕೆಂದು ಕುಮಾರಧಾರ ನದಿ ಬಳಿಗೆ ಬಂದಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾದರೂ ಮೃತಪಟ್ಟರು.

ಆ ಬಳಿಕ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.


ಕುಕ್ಕೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದೇ ತಕ್ಷಣಕ್ಕೆ ಚಿಕಿತ್ಸೆ ಸಿಗದೇ ಯಾತ್ರಾರ್ಥಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದರು


0 تعليقات

إرسال تعليق

Post a Comment (0)

أحدث أقدم