ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ನದಿಗೆ ಹಾರಿ ಆತ್ಮಹತ್ಯೆ

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ನದಿಗೆ ಹಾರಿ ಆತ್ಮಹತ್ಯೆ

 


ಕಾರವಾರ: ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಕಾಳಿ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.


ನಗರದ ಜಿಪಂ ಕಚೇರಿಯಲ್ಲಿ ಕಳೆದ ಸುಮಾರು ೬ ವರ್ಷಗಳಿಂದ ಎನ್.ಜಿ.ಓ. ಮುಖಾಂತರ ಪ್ರಾಜೆಕ್ಟ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ಬೆಳಗಾವಿ ಜಿಲ್ಲೆಯ ಕಿತ್ತೂರು ಮೂಲದ ಶ್ರೀಕಾಂತ ತಮ್ಮಣ್ಣ ಮೇಲಿನಮನಿ(೩೮) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.


ಶುಕ್ರವಾರದಂದು ಇವರ ದ್ವಿಚಕ್ರ ವಾಹನವು ಕಾಳಿ ಸೇತುವೆಯ ಮೇಲೆ ಪತ್ತೆಯಾಗಿತ್ತು. ಬೆಳಗ್ಗೆ ತಾಲೂಕಿನ ಸುಂಕೇರಿ ಜಗತಕಟ್ಟಾ ಬಳಿ ಈತನ ಶವ ಪತ್ತೆಯಾಗಿದೆ.


ಈ ಬಗ್ಗೆ ಮೃತನ ತಂದೆ ಕಾರವಾರ ನಗರ ಠಾಣೆಗೆ ದೂರು ನೀಡಿದ್ದು ಕೆಲಸದ ಸಮಯದಲ್ಲಿ ಮೇಲಧಿಕಾರಿಗಳ ಒತ್ತಡ ಹಾಗೂ ಕಿರುಕುಳಕ್ಕೆ ಬೇಸತ್ತು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ


ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.



0 Comments

Post a Comment

Post a Comment (0)

Previous Post Next Post