ಬೆಂಗಳೂರು : ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ನಿಶ್ಚಿತಾರ್ಥ ಡಿಸೆಂಬರ್ 11 ಭಾನುವಾರ ಬೆಂಗಳೂರಿನ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆದಿದೆ.
ಅಭಿಷೇಕ್ ಅಂಬರೀಶ್ ಕೈ ಹಿಡಿಯಲಿರುವ ಅವಿವಾ, ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿಯಾಗಿದ್ದಾರೆ.
ನಿಶ್ಚಿತಾರ್ಥಕ್ಕೆ ಸಚಿವರಾದ ಅಶ್ವತ್ಥ ನಾರಾಯಣ್ ಕೂಡ ಆಗಮಿಸಿದ್ದರು.
ನಾಲ್ಕು ವರ್ಷಗಳಿಂದ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ವಿಚಾರವನ್ನು ಕುಟುಂಬಕ್ಕೆ ತಿಳಿಸಿ ಗ್ರೀನ್ ಸಿಗ್ನಲ್ ಪಡೆದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
Post a Comment