ರಾಯಚೂರು: ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಹಾಗೂ ನಿರ್ದೇಶಕ ಹರ್ಷ ದಂಪತಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದರು.
ರಾಯಚೂರು ನಗರದಲ್ಲಿ ಶಿವಣ್ಣನವರ 125ನೇ ಸಿನಿಮಾ ವೇದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿಮಿತ್ತ ಬೆಳಗ್ಗೆ ಆಗಮಿಸಿದ್ದಾರೆ.
ಮೊದಲಿಗೆ ಮಂಚಾಲಮ್ಮದೇವಿ ದರ್ಶನ ಪಡೆದು ಬಳಿಕ ರಾಯರ ಮೂಲ ಬೃಂದಾವನದ ದರ್ಶನ ಪಡೆದರು. ನಂತರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶೀರ್ವಾದ ಪಡೆದು ಕೆಲ ಕಾಲ ಸಮಾಲೋಚನೆ ನಡೆಸಿದರು.
ಇಂದು ಸಂಜೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರೂಪಕಿ ಅನುಶ್ರೀ ಕೂಡ ಭಾಗವಹಿಸುವ ಸಾಧ್ಯತೆಗಳಿವೆ.
إرسال تعليق