ನಡ: ಕ್ರೀಡೆ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ದೃಢತೆಗೆ ಸಹಕಾರಿಯಾಗುತ್ತದೆ. ಪಠ್ಯ ಮತ್ತು ಪಠ್ಯೇತರ ವಿಷಯಗಳಲ್ಲಿ ವಿದ್ಯಾರ್ಥಿಗಳು ಸಫಲತೆ ಕಂಡುಕೊಂಡಾಗ ಯಶಸ್ವಿ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ನಡ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಗೌಡ ತಿಳಿಸಿದರು.
ಅವರು ಕಾಲೇಜಿನ ಕ್ರೀಡಾಕೂಟವನ್ನು ದೀಪಪ್ರಜ್ವಲನದ ಮೂಲಕ ಉದ್ವಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ, ವಾಣಿ ಶಿಕ್ಷಣ ಸಂಸ್ಥೆಗಳ ಜತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ. ಗೌರವ ರಕ್ಷೆ ಸ್ವೀಕರಿಸಿದರು. ನಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಕುಮಾರಿ ಹರ್ಷ, ಕುಮಾರಿ ಚೇತನ, ಶಶಾಂಕ್ ಮತ್ತು ಸುದೀಪ್ ಕ್ರೀಡಾಜ್ಯೋತಿ ನಿರ್ವಹಣೆಗೈದರು. ಪ್ರೌಢ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್‌ಸೆಟ್‌ನೊಂದಿಗೆ, ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು.
ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಅಜಿತ್ ಆರಿಗ, ಉದ್ಯಮಿ ವಸಂತ ಗೌಡ ವಿ. ಜಿ. ಕೂಲ್, ಉದ್ಯಮಿ ಕರುಣಾಕರ ಗೌಡ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವೀರಪ್ಪ ಸಾಲಿಯಾನ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಯಾಕೂಬ್, ಸಹಶಿಕ್ಷಕ ಶಿವಪುತ್ರ ಉಪಸ್ಥಿತರಿದ್ದರು.
ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್ ಸ್ವಾಗತಿಸಿ, ಕ್ರೀಡಾ ಸಂಯೋಜಕಿ ವಸಂತಿ ಪಿ. ಯವರು ವಂದಿಸಿದರು. ವಿದ್ಯಾರ್ಥಿನಿಯರಾದ ನೀಲಾವತಿ, ಬಿಸ್ಮಿತಾ, ದೀಕ್ಷಾ, ದೀಪ್ತಿ, ತೃಪ್ತಿ ಪ್ರಾರ್ಥಿಸಿದರು. ವಿದ್ಯಾರ್ಥಿ ನಾಯಕ ನಿತೇಶ್ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡಾ ತರಬೇತುದಾರ ಹರ್ಷ ಕ್ರೀಡಾಕೂಟ ನೆರವೇರಿಸಿಕೊಟ್ಟರು. ಉಪನ್ಯಾಸಕರಾದ ಶ್ರೀಮತಿ ಲಿಲ್ಲಿ ಪಿ.ವಿ. ಸುಖೇತ, ವಿದ್ಯಾ, ಶಿಲ್ಪಾ ಸಹಕರಿಸಿದರು, ಉಪನ್ಯಾಸಕ ಮೋಹನ ಗೌಡ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment