ಮಂಗಳೂರು: ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37 ನೇ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳದ ಧರ್ಮಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಆಹ್ವಾನಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ಹೆಗ್ಗಡೆ ಅವರಿಗೆ ಆಮಂತ್ರಣ ನೀಡಲಾಯಿತು. ರಾಜ್ಯಸಭಾ ಸದಸ್ಯರಾಗಿರುವ ಅವರನ್ನು ಅಭಿನಂದಿಸಲಾಯಿತು.
ಮಂಗಳೂರಿನಲ್ಲಿ ಪತ್ರಕರ್ತರ ಸಮ್ಮೇಳನ ಸಾನಿಧ್ಯ ವಹಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂದರ್ಭವನ್ನು ನೆನಪಿಸಿ ಅಭಿನಂದನೆಗಳನ್ನು ಸಲ್ಲಿಸಲಾಯಿತು .
ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ.ಹೆಗ್ಗಡೆ ಅವರು ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
إرسال تعليق