ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ; ಮೂವರು ವಿದ್ಯಾರ್ಥಿಗಳು ಮೃತ್ಯು

ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ; ಮೂವರು ವಿದ್ಯಾರ್ಥಿಗಳು ಮೃತ್ಯು

 


ಬಳ್ಳಾರಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದರು. ಬಳ್ಳಾರಿ ತಾಲೂಕಿನ ಹಲಕುಂದಿ ಸಮೀಪ ಮಧ್ಯರಾತ್ರಿ 2 ಗಂಟೆಗೆ ಈ ದುರ್ಘಟನೆ ನಡೆದಿದೆ. 


ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ಸು ಡಿಕ್ಕಿಯಾಗಿದೆ.


ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18), ಸಂಡೂರು ನಾಗೇನಹಳ್ಳಿಯ ಹೊನ್ನೂರ(22) ಮೃತಪಟ್ಟವರು. 


ಇವರು ಮೂವರೂ ಬಳ್ಳಾರಿಯ ಎಸ್‌ಸಿ, ಎಸ್‌ಟಿ ಹಾಸ್ಟೆಲ್ ವಿದ್ಯಾರ್ಥಿಗಳಾಗಿದ್ದಾರೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


ಸ್ಥಳಕ್ಕೆ ಧಾವಿಸಿದ ಬಳ್ಳಾರಿ ಗ್ರಾಮೀಣ ಪೊಲೀಸರು ಬಸ್ಸನ್ನು ಸೀಜ್ ಮಾಡಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳು ಮಧ್ಯರಾತ್ರಿ ಅಲ್ಲಿಗೆ‌ ಏಕೆ ಹೋಗಿದ್ದರೆಂಬುದು ಗೊತ್ತಾಗಿಲ್ಲ. 


ವಿದ್ಯಾರ್ಥಿಗಳು ರಸ್ತೆ ದಾಟುತ್ತಿರುವ ಸಂದರ್ಭದಲ್ಲಿ ಅಪಘಾತ ನಡೆದಿರುವ ಸಾಧ್ಯತೆಯಿದೆ. 


0 تعليقات

إرسال تعليق

Post a Comment (0)

أحدث أقدم