ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಕಲ್ಲಡ್ಕ ಕ್ಕೆ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇಂದು ಕಲ್ಲಡ್ಕ ಕ್ಕೆ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 


ಬಂಟ್ವಾಳ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.10ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಕ್ಕೆ ಪ್ರವಾಸ ಕೈಗೊಂಡಿದ್ದಾರೆ.


ಸಂಜೆ 6.05ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 6.15ಕ್ಕೆ ಅಲ್ಲಿಂದ ಹೊರಟು 6.50 ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಆಗಮಿಸುವರು.


ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.


ರಾತ್ರಿ 8.30 ಕ್ಕೆ ಕಲ್ಲಡ್ಕದಿಂದ ರಸ್ತೆ ಮಾರ್ಗವಾಗಿ ಹೊರಟು 9.05ಕ್ಕೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 9.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم