ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೆಲ್ಮೆಟ್ ಸರಿಯಾಗಿ ಧರಿಸದ ವಾಹನ ಸವಾರರಿಗೆ ದಂಡ ಫಿಕ್ಸ್

ಹೆಲ್ಮೆಟ್ ಸರಿಯಾಗಿ ಧರಿಸದ ವಾಹನ ಸವಾರರಿಗೆ ದಂಡ ಫಿಕ್ಸ್

 


ಬೆಂಗಳೂರು :  ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದರೆ ದಂಡ ವಿಧಿಸಲಿದ್ದಾರೆ.


ಬೆಂಗಳೂರು ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ನ್ನು ಹೆಲ್ಮೆಟ್ ರಹಿತ ಚಾಲನೆ ಎಂದೇ ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ. 


ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿಯಲ್ಲಿ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.


ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಗಳನ್ನು ಧರಿಸಿಕೊಂಡು ಸವಾರಿ ಮಾಡುತ್ತಿದ್ದಾರೆ. ಟೋಪಿ ಮಾದರಿಯ ಹೆಲ್ಮೆಟ್ ಗಳನ್ನು ಹೆಲ್ಮೆಟ್ ರಹಿತ ಚಾಲನೆ ಎಂದು ಪರಿಗಣಿಸಿ 500 ರೂ. ದಂಡ ವಿಧಿಸಲಾಗುತ್ತಿದೆ.


0 Comments

Post a Comment

Post a Comment (0)

Previous Post Next Post