ಬೆಳಗಾವಿ: ಈಗಾಗಲೇ ರಾಜ್ಯ ಸರ್ಕಾರದಿಂದ ನೇಕಾರರಿಗೆ 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.
ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಘೋಷಿಸಿದ್ದಾರೆ.
ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ.
ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಬಗ್ಗೆ ಅಧಿಕೃತವಾಗಿ ನಾಳೆ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದರು.
إرسال تعليق