ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಶೀಘ್ರವೇ 2,000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಸಾರಿಗೆ ಸಚಿವ ಬಿ. ಶ್ರೀರಾಮುಲು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಸಂದರ್ಭದಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದು, ಚಾಲಕ ಹುದ್ದೆ ಭರ್ತಿಗೆ ಶೀಘ್ರವೇ ಚಾಲನೆ ನೀಡಲಾಗುತ್ತದೆ ಎಂದರು.
ಅಲ್ಲದೆ ತರಬೇತಿ ಅವಧಿಯಲ್ಲಿ ಚಾಲಕರಿಗೆ 10,000 ರೂಪಾಯಿ ನೀಡಲಾಗುತ್ತಿದ್ದು ಈ ಮೊತ್ತವನ್ನು 20,000 ರೂ.ಗಳಿಗೆ ಹೆಚ್ಚಿಸಲಾಗುತ್ತದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
Post a Comment