ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಸಿಕವಾಗಿ ನೀಡಲಾಗುತ್ತಿರುವ ಗೌರವಧನ ಹೆಚ್ಚಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ
ವಿಧಾನ ಪರಿಷತ್ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಯು.ಬಿ.ವೆಂಕಟೇಶ್ ಸ್ವಾತಂತ್ರ್ಯ ಹೋರಾಟಗಾರರಿಗೆ ಬೇರೆ ರಾಜ್ಯಗಳ ಮಾದರಿಯಲ್ಲಿ ರೂ.25,000 ಗೌರವ ಧನವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಕಂದಾಯ ಸಚಿವರು, ಸ್ವಾತಂತ್ರ್ಯ ಹೋರಾಟಗಾರರ 10 ಸಾವಿರ ಗೌರವಧನವನ್ನು 15 ಸಾವಿರ ಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ. ಹಣಕಾಸು ಇಲಾಖೆ ಒಪ್ಪಿಗೆ ಬಂದ ತಕ್ಷಣ ಗೌರವಧನಲ್ಲಿ ಹೆಚ್ಚಳ ಮಾಡಲಾಗುವುದು ಎಂದುತಿಳಿಸಿದರು.
ಮಾಸಿಕ ಪಿಂಚಣಿ ಪಡೆಯುತ್ತಿರುವ ಸ್ವಾತಂತ್ರ್ಯ ಹೋರಾಟಗಾರರು ಮರಣ ಹೊಂದಿದರೆ, ಅವರ ಪತ್ನಿ ಅಥವಾ ಪತಿಗೆ ಅಥವಾ ಅವರ ಅಪ್ರಾಪ್ತ ವಯಸ್ಕ ಮಕ್ಕಳಿಗೆ ಕುಟುಂಬ ಪಿಂಚಣಿಯನ್ನು ನೀಡಲಾಗುತ್ತಿದೆ. ಅವರ ವಿಧವಾ ಪತ್ನಿ ಅಥವಾ ಪತಿಗೆ ರಾಜ್ಯದ ವ್ಯಾಪ್ತಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್, ಸ್ವಾತಂತ್ರ್ಯ ಯೋಧರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ 4 ಸಾವಿರ ರೂ,ಗಳನ್ನು ಶವಸಂಸ್ಕಾರ ಭತ್ಯೆಯಾಗಿ ನೀಡಲಾಗುತ್ತಿದೆ ಎಂದು ವಿವರಿಸಿದರು
Post a Comment