KGF ತಾತಾ ಅಂತಲೇ ಫೇಮಸ್ ಆಗಿದ್ದ ನಟ ಕೃಷ್ಣ ಜಿ ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
KGF , KGF 2 ಎರೆಡೂ ಸಿನಿಮಾಗಳಲ್ಲಿ ನಟಿಸಿದ್ದ ಇವರು KGF ತಾತ ಎಂದು ಜನಪ್ರಿಯರಾಗಿದ್ದರು. ನಂತರ ನ್ಯಾನೋ ನಾರಾಯಣಪ್ಪ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಿದ್ದರು.
ಕೆಜಿಎಫ್ ಬಿಡುಗಡೆಯಾದ ನಂತರ 15ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ವಿನಾಯಕ ಖಾಸಗಿ ಆಸ್ಪತ್ರೆಗೆ ದಾಖಲಾಸಿ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಜಿ ರಾವ್ ಅವರನ್ನ ಸುಸ್ತಾದ ಕಾರಣ ಮಧ್ಯರಾತ್ರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದಷ್ಟು ಬೇಗ ತಾತಾ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
Post a Comment