ಮಂಗಳೂರು: ಕೊರೊನಾ ಮುನ್ನೆಚ್ಚರಿಕೆಯ ಹಿನ್ನೆಲೆ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೊರೊನಾ ಲಕ್ಷಣ ಕಂಡು ಬಂದರೆ ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ.
ವಿದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೂ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ್ದು, ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿ ಸುವ ವಿದೇಶಿ ಪ್ರಯಾಣಿಕರಲ್ಲಿ ಶೇ. 2ರಷ್ಟು ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಈ ವೇಳೆ ಕೋವಿಡ್ ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್‌ಗ ಕಳುಹಿಸಲಾಗುತ್ತದೆ. ಕೋವಿಡ್ ದೃಢಪಟ್ಟ ವ್ಯಕ್ತಿಗಳಿಗೆ ಐಸೊಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
إرسال تعليق