ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಆನಂದ್ ಸಿಂಗ್

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಆನಂದ್ ಸಿಂಗ್

 


ಮಂಗಳೂರು: ಶನಿವಾರ ಡಿ.17ರಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಆನಂದ್‌ ಸಿಂಗ್ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮೊದಲು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿಂದ ಅಳದಂಗಡಿಗೆ ಭೇಟಿ ನೀಡಿದ್ದಾರೆ.

ಕಲ್ಲುರ್ಟಿ ದೈವದ ಕೋಲ ಸೇವೆಯಲ್ಲಿ ಪಾಲ್ಗೊಂಡ ಸಚಿವರು ಮತ್ತವರ ಕುಟುಂಬದವರು, ದೈವದ ಗಂಧ ಪ್ರಸಾದ ಸ್ವೀಕರಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಜತೆಗಿದ್ದರು.

0 تعليقات

إرسال تعليق

Post a Comment (0)

أحدث أقدم