ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ಅಪಘಾತ; ಓರ್ವ ಸಾವು, ಇಬ್ಬರು ಗಂಭೀರ

ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ಅಪಘಾತ; ಓರ್ವ ಸಾವು, ಇಬ್ಬರು ಗಂಭೀರ

 


ಬೆಳ್ತಂಗಡಿ: ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆಯೊಂದು ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಎಂದು ಗುರುತಿಸಲಾಗಿದ್ದು, ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್(48) , ಪಣಕಜೆ ನಿವಾಸಿ ಕೆ.ಮೊಹಮ್ಮದ್(57) ಗಂಭೀರ ಗಾಯಗೊಂಡಿದ್ದಾರೆ.

ಶಾಲಾ ಬಸ್ಸು ಕೊಯ್ಯೂರಿನಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುತಿದ್ದಾಗ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುತಿದ್ದ ಗೂಡ್ಸ್ ರಿಕ್ಷಾಕ್ಕೆ ಮಲೆಬೆಟ್ಟು ದೇವಸ್ಥಾನದ ಬಳಿ ಡಿಕ್ಕಿ ಹೊಡೆದಿದೆ.

ರಿಕ್ಷಾದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರಿಕ್ಷಾದಲ್ಲಿದ್ದ ರಝಾಕ್(50) ಸಾವನ್ನಪ್ಪಿದ್ದು ,ಕುವೆಟ್ಟು ಗ್ರಾಮದ ಪಿಲಿಚಾಮುಂಡಿ ನಿವಾಸಿ ಚಾಲಕ ಹನೀಫ್(48) , ಪಣಕಜೆ ನಿವಾಸಿ ಕೆ.ಮೊಹಮ್ಮದ್(57) ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 Comments

Post a Comment

Post a Comment (0)

Previous Post Next Post