ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ

 


ಹಾವೇರಿ : ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.

ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಭಾರತಿ ಕಮದೊಳ್ಳಿ (40) ಮಗ ಕಿರಣ್ (21) ಹಾಗೂ ಸೊಸೆ ಸೌಜನ್ಯ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 3 ತಿಂಗಳ ಹಿಂದೆ ಕಿರಣ್, ಸೌಜನ್ಯ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post