ಹಾವೇರಿ : ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.
ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಭಾರತಿ ಕಮದೊಳ್ಳಿ (40) ಮಗ ಕಿರಣ್ (21) ಹಾಗೂ ಸೊಸೆ ಸೌಜನ್ಯ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 3 ತಿಂಗಳ ಹಿಂದೆ ಕಿರಣ್, ಸೌಜನ್ಯ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق