ಡಿ.31ರಂದು ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದ ಕಾರ್ಯಕ್ರಮ
ಕಾಸರಗೋಡು: ವಿಟ್ಲ ಶ್ರೀ ಅಯ್ಯಪ್ಪ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಹಿತ ಅಯ್ಯಪ್ಪ ಮಾಲಾಧಾರಿಗಳ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಡಿ.27ರಿಂದ ಜನವರಿ 1ರ ತನಕ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಿ. 31ರಂದು ಸಂಜೆ 4.00 ರಿಂದ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಸಂಸ್ಥೆಯ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂಸ್ಥೆಯ ಕಲಾವಿದರಾದ ಗುರುರಾಜ್ ಕಾಸರಗೋಡು, ಡಾ. ವಾಣಿಶ್ರೀ ಕಾಸರಗೋಡು, ನಿರೀಕ್ಷಾ ವಿಟ್ಲ, ಚುಕ್ಕಿ ವಿಟ್ಲ, ನಿಶಿತ್ ಜಿ ಉಪ್ಪಿನಂಗಡಿ, ಪ್ರಥಮ್ಯ ಯು ವೈ, ಭವಿಷ್, ಪೂರ್ವಿಕ, ಶ್ವೇತಾ ಯು ವೈ, ಪ್ರಾರ್ಥನಾ, ಪ್ರಣತಿ, ಸಮನ್ಯು, ಋಷಿ, ಹನ್ಸಿಕಾ, ನವ್ಯ, ಹಾಗೂ ಮುಂತಾದ ಪ್ರತಿಭಾವಂತ ಕಲಾವಿದರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತ್ಯ ಪ್ರಸ್ತುತಿ ಹಾಗೂ ನಿರೂಪಣೆಯನ್ನು ಸಂಸ್ಥೆಯ ಅಧ್ಯಕ್ಷೆ ಡಾ. ವಾಣಿಶ್ರೀ ಕಾಸರಗೋಡು ನಿರ್ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment