ಬೆಂಗಳೂರು: ರಾಜ್ಯದ ಸರ್ಕಾರಿ ಸಂಸ್ಥೆಗಳ ಪೈಕಿ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣೆ ಮಾಡಿರುವ ಸಂಸ್ಥೆಯ ಪ್ರಶಸ್ತಿಯನ್ನು ಕೆ ಎಸ್ ಆರ್ ಟಿ ಸಿ ಗೆ ಪ್ರದಾನ ಮಾಡಲಾಯಿತು.
ರಾಜಭವನದಲ್ಲಿ ಹಮ್ಮಿಕೊಂಡಿದ್ದ
ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ,ಕೆ ಎಸ್ ಆರ್ ಟಿ ಸಿಯ ಸಿಬ್ಬಂದಿ ಮತ್ತು ಜಾಗೃತ ನಿರ್ದೇಶಕ ಡಾ. ನವೀನ್ ಭಟ್.ವೈ ಅವರಿಗೆ ಪ್ರದಾನ ಮಾಡಿದರು.
ನಿಗಮವು ಸತತ 8ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿಯನ್ನು ಪಡೆಯುತ್ತಿದೆ. ಸಮಾರಂಭದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿವೃತ್ತ ನಿರ್ದೇಶಕ ಬ್ರಿಗೇಡಿಯರ್ ಎಂ. ಬಿ. ಶಶಿಧರ್ ಉಪಸ್ಥಿತರಿದ್ದರು.
إرسال تعليق