ಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃಧ್ಧಿ ಮಂಡಳಿ, ಹುಬ್ಬಳ್ಳಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಹುಬ್ಬಳ್ಳಿ, ತೋಟಗಾರಿಕೆ ಇಲಾಖೆ ಧಾರವಾಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ಮತ್ತು ಉಳವಾಯೋಗಿ ರೈತ ಉತ್ಪಾದಕ ಸಂಸ್ಥೆ ಅಮರಗೋಳ ಇವುಗಳ ಸಂಯುಕ್ತಾಶ್ರಯದಲ್ಲಿ 11 ನೇ ಒಣಮೆಣಸಿನಕಾಯಿ ಮೇಳವನ್ನು ಜನವರಿ 20ರಿಂದ 22ರವರೆಗೆ ಮೂರುಸಾವಿರ ಮಠದ ಹೈಸ್ಕೂಲ ಮೈದಾನದಲ್ಲಿ ಆಯೋಜಿಸಲಾಗಿದೆ.
ಆಸಕ್ತ ರೈತರು ಮುಂಚಿತವಾಗಿ ನೋಂದಣಿಯನ್ನು ತಾಲ್ಲೂಕಾ ತೋಟಗಾರಿಕೆ ಕಛೇರಿಗಳಲ್ಲಿ, ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯಲ್ಲಿ ಪಹಣಿ ಪತ್ರಿಕೆ ಮತ್ತು ಆಧಾರ ಕಾರ್ಡನೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0836 2375030, ತೋಟಗಾರಿಕೆ ಇಲಾಖೆ ಹುಬ್ಬಳ್ಳಿ ದೂರವಾಣಿ ಸಂಖ್ಯೆ 0836 2355138, ತೋಟಗಾರಿಕೆ ಇಲಾಖೆ ಧಾರವಾಡ ದೂರವಾಣಿ ಸಂಖ್ಯೆ 0836 2746334, ತೋಟಗಾರಿಕೆ ಇಲಾಖೆ ನವಲಗುಂದ 08380 229170, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ದೂರವಾಣಿ ಸಂಖ್ಯೆ 08304 296297 ಸಂಖ್ಯೆಗಳನ್ನು ಸಂಪರ್ಕಿಸುವಂತೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment