ತಿರುವನಂತಪುರಂ: ಸ್ಥಳೀಯ ಹೋಟೆಲ್ನಲ್ಲಿ ಬಿರಿಯಾನಿ ಆರ್ಡರ್ ಮಾಡಿ ಸೇವಿಸಿದ್ದ 20 ವರ್ಷದ ಯುವತಿ ಸಾವನ್ನಪ್ಪಿದ ಘಟನೆಯೊಂದು ಕೇರಳದಲ್ಲಿ ನಡೆದಿದೆ.
ಮೃತ ಯುವತಿಯನ್ನು ಪೆರುಂಬಳದ ಅಂಜು ಶ್ರೀಪಾರ್ವತಿ ಎಂದು ಗುರುತಿಸಲಾಗಿದೆ.
ಡಿಸೆಂಬರ್ 31 ರಂದು ಕಾಸರಗೋಡಿನ ರೊಮ್ಯಾನ್ಸಿಯಾ ಎಂಬ ರೆಸ್ಟೋರೆಂಟ್‌ನಿಂದ ಆನ್‌ಲೈನ್ ಮೂಲಕ ಕುಜಿಮಂತಿ ಬಿರಿಯಾನಿಯನ್ನು ಆರ್ಡರ್ ಮಾಡಿ ತರಿಸಿಕೊಂಡು ಸೇವಿಸಿದ್ದರು.
ನಂತರ ಅಸ್ವಸ್ಥರಾದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಯುವತಿಯ ಪೋಷಕರು ಪೊಲೀಸರಿಗೆ ಸಹ ದೂರು ನೀಡಿದ್ದಾರೆ. ಆದರೆ ಶನಿವಾರ ಮುಂಜಾನೆ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇದೀಗ ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ
ಮೊದಲಿಗೆ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕರ್ನಾಟಕದ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಕೊನೆಯುಸಿರೆಳೆದಿದ್ದಾರೆ.
إرسال تعليق