ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೋಷಕ ಪಾತ್ರದಲ್ಲಿ ಗಮನ ಸೆಳೆದ ನಟ ಲಕ್ಷ್ಮಣ್ ನಿಧನ

ಪೋಷಕ ಪಾತ್ರದಲ್ಲಿ ಗಮನ ಸೆಳೆದ ನಟ ಲಕ್ಷ್ಮಣ್ ನಿಧನ

 


ಯಜಮಾನ', 'ಸೂರ್ಯವಂಶ' ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ (Lakshman) ಅವರು ಇಂದು (ಜನವರಿ 23) ನಿಧನ ಹೊಂದಿದ್ದಾರೆ.


ಹೃದಯಾಘಾತ ಸಂಭವಿಸಿದ್ದರಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಲಕ್ಷ್ಮಣ್​ ನಿಧನಕ್ಕೆ ಸ್ಯಾಂಡಲ್​​ವುಡ್ (Sandalwood) ಸೆಲೆಬ್ರಿಟಿಗಳು ಹಾಗೂ ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.


ಭಾನುವಾರ (ಜನವರಿ 22ರಂದು) ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

0 تعليقات

إرسال تعليق

Post a Comment (0)

أحدث أقدم