ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟಿ ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

ನಟಿ ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

 


ಬೆಂಗಳೂರು : ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಅವರು ಇದೇ ತಿಂಗಳ 26 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ಸಮಾರಂಭವನ್ನು ನಡೆಸಲು ಜೋಡಿ ನಿರ್ಧರಿಸಿದೆ

ಹರಿಪ್ರಿಯಾ-ವಸಿಷ್ಠ ಅವರು ಆಶ್ರಮಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಪ್ರತಾಪ್​ ಸಿಂಹ ಕೂಡ ಜತೆಗಿದ್ದರು. ಈ ಫೋಟೊಗಳನ್ನು ಅವರು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ತಿಳಿಸಿದ್ದಾರೆ. ಖ್ಯಾತ ಚಲನಚಿತ್ರ ನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ವಿವಾಹ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳ 26 ರಂದು ನಡೆಯಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم