ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನ

ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನ

 


ಡಿಕೇರಿ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ.

ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಸೋಮವಾರಪೇಟೆ ವೃತ್ತ, ವಿರಾಜಪೇಟೆ ವೃತ್ತರವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.

0 Comments

Post a Comment

Post a Comment (0)

Previous Post Next Post