ಚಿತ್ರದುರ್ಗ: ತಳಸಮುದಾಯದ ವಿಶಿಷ್ಟ ಕಲೆಗಳನ್ನು ಮುನ್ನೆಲೆಗೆ ತರಲು ಇಲಾಖೆಯಿಂದ ತಳಸಮುದಾಯದ ವಿಶಿಷ್ಟ ಕಲೆಗಳನ್ನು ಗುರುತಿಸಿ, ಅಂತಹ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲೆಗಳನ್ನು ಕಲಿಯಲು ಆಸಕ್ತರಿರುವ ಕಲಾವಿದರನ್ನು ಗುರುತಿಸಿ, ಅವರಿಗೆ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜನವರಿ 21 ಕೊನೆಯ ದಿನ.
ಆಸಕ್ತಿ ಇರುವ ಜಿಲ್ಲೆಯಲ್ಲಿನ 15 ರಿಂದ 30 ವರ್ಷದ ಒಳಗಿನ ಕಲಾವಿದರು ಜನವರಿ 21ರೊಳಗೆ ತಮ್ಮ ಸ್ವವಿವರದೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿತ್ರದುರ್ಗ ಕಚೇರಿಗೆ ಖುದ್ದಾಗಿ ತಂದು ಕೊಡಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆ 08194-224496ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ತಿಳಿಸಿದ್ದಾರೆ.
Post a Comment