ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಚಿಗುರಿ ಜತೆಯಾಗಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಈ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹೌದು ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಚಂದನ್ Fat+Her ಅಂದರೆ ಏನು ಎಂಬ ಪ್ರಶ್ನೆಯನ್ನು ನಿವೇದಿತಾ ಗೌಡಗೆ ಕೇಳಿದ್ದಾರೆ.
ಅದಕ್ಕೆ ಉತ್ತರ ಫಾದರ್ ಹಾಗಾಗಿ ಚಂದನ್ ಶೆಟ್ಟಿ ತಂದೆ ಆಗುತ್ತಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದಾರೆ. ಅಭಿಮಾನಿಗಳು ಕಮೆಂಟ್‌ಗಳ ಮೂಲಕ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಹಾಗೆಯೇ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.
ಅಭಿಮಾನಿಗಳ ಈ ಊಹೆಯು ನಿಜನಾ ಎಂಬುದನ್ನು ಈ ಜೋಡಿ ಅಧಿಕೃತವಾಗಿ ಹೇಳುವವರೆಗೂ ಕಾದು ನೋಡಬೇಕಿದೆ.
Post a Comment