ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರೈತರಿಗೆ ಉಚಿತ ಡೀಸೆಲ್ ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ

ರೈತರಿಗೆ ಉಚಿತ ಡೀಸೆಲ್ ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ

 


ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.


ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ.


ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡೀಸೆಲ್ ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. 


ರೈತ ಮಕ್ಕಳಿಗೆ ನೀಡುವ ರೈತನಿಧಿ ವಿದ್ಯಾರ್ಥಿ ವೇತನವನ್ನು ರೈತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸುವ ಯೋಜನೆಗೆ ಚಾಲನೆ ನೀಡುವರು. ಡಾ.ಎಸ್.ವಿ. ಪಾಟೀಲ ಫೌಂಡೇಶನ್ ಉದ್ಘಾಟಿಸುವರು.


ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಸಾವಯವ ಕೃಷಿ ನೈಸರ್ಗಿಕ ಕೃಷಿ ಕುರಿತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ಕೃಷಿ ಯಂತ್ರೋಪಕರಣಗಳ ವಿತರಣೆ ಸಹ ನಡೆಯಲಿದೆ ಎಂದು ಶಿವಯೋಗಿ ಕಳಸ ತಿಳಿಸಿದರು.

0 Comments

Post a Comment

Post a Comment (0)

Previous Post Next Post