ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟಿ ರಚಿತಾ ರಾಮ್ ವಿರುದ್ಧ ದೂರು ದಾಖಲು

ನಟಿ ರಚಿತಾ ರಾಮ್ ವಿರುದ್ಧ ದೂರು ದಾಖಲು



ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ್‌ ಹಾಗೂ ರಚಿತಾ ರಾಮ್‌ ಅಭಿನಯದ ಬಹುನಿರೀಕ್ಷಿತ 'ಕ್ರಾಂತಿ' ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. 

ಈ ಸಿನಿಮಾ ಮುಂದಿನ ವಾರ ಗುರುವಾರದಂದು ಗಣರಾಜ್ಯೋತ್ಸವದ ಪ್ರಯುಕ್ತ ತೆರೆಗೆ ಬರಲಿದೆ. ಈ ಸಿನಿಮಾದ ಬಿಡುಗಡೆಗೂ ಮುನ್ನವೇ ನಾಯಕಿ ರಚಿತಾ ರಾಮ್‌ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ನಟಿ ರಚಿತಾ ರಾಮ್‌ ಅವರು ನೀಡಿರುವ ಹೇಳಿಕೆಯೊಂದು ತೀವ್ರ ವಿವಾದ ಸೃಷ್ಟಿಸಿದೆ. ಕಳೆದ ವಾರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ, ನಟಿ ಗಣರಾಜ್ಯೋತ್ಸವದ ಬಗ್ಗೆ ವಿವಾದಿತ ಮಾತೊಂದನ್ನು ಆಡಿದ್ದರು.

 “ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ ಈ ವರ್ಷ ಗಣರಾಜ್ಯೋತ್ಸವ ಮರೆತುಬಿಡಿ. ಕ್ರಾಂತಿಯ ಉತ್ಸವ ಆಚರಿಸಿ ಅಷ್ಟೇ ” ಎಂದು ನಟಿ ರಚಿತಾ ರಾಮ್‌ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನೆಟ್ಟಿಗರು ರಚಿತಾ ರಾಮ್‌ ವಿರುದ್ಧ ಹರಿಹಾಯ್ದಿದ್ದಾರೆ. ಟ್ರೋಲ್‌ ಸಹ ಮಾಡಿದ್ದಾರೆ.

ದೇಶಕ್ಕಿಂತ ನಿಮ್ಮ ಸಿನಿಮಾ ದೊಡ್ಡದಲ್ಲ. ಅನಕ್ಷರಸ್ತೆ ತರ ಮಾತನಾಡಿ, ಗೌರವ ಕಳೆದುಕೊಳ್ಳಬೇಡಿ ಎಂದಿದ್ದರು. ನಿಮಗೆ ಈ ದೇಶದ ಮೇಲೆ ಗೌರವ ಇಲ್ಲದಿದ್ದರೆ, ಪಾಕಿಸ್ತಾನಕ್ಕೆ ಹೋಗಿ ಎಂದು ನಟಿ ರಚಿತಾ ರಾಮ್‌ ಮೇಲೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಗೆ ಸಂಬಂಧಿಸಿದಂತೆ ರಚಿತಾರಾಮ್‌ ವಿರುದ್ಧ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ದೂರು ನೀಡಲಾಗಿದೆ. 

ನಟಿ ರಚಿತಾ ರಾಮ್‌ ಭಾರತ ಸಂವಿಧಾನಕ್ಕೆ ಹಾಘೂ ಗಣರಾಜ್ಯೋತ್ಸವಕ್ಕೆ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಒತ್ತಾಯ ಮಾಡಿದ್ದಾರೆ


0 تعليقات

إرسال تعليق

Post a Comment (0)

أحدث أقدم