ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಬೇಡ್ಕರ್ ಭವನದ ಆವರಣದಲ್ಲಿ ಫಲಪುಷ್ಪ ಪ್ರದರ್ಶನ

ಅಂಬೇಡ್ಕರ್ ಭವನದ ಆವರಣದಲ್ಲಿ ಫಲಪುಷ್ಪ ಪ್ರದರ್ಶನ

 


ಶಿವಮೊಗ್ಗ: ನಗರದ ತೋಟಗಾರಿಕೆ ಇಲಾಖೆ ಹಾಗೂ ಅಂಬೇಡ್ಕರ್ ಭವನದ ಆವರಣದಲ್ಲಿ ಜ.೨೬ರಿಂದ ಜ.೨೯ ರವರೆಗೆ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಚಾಲನೆ ನೀಡಿದರು.


ರೈತರು ಬೆಳೆದ ವಿವಿಧ ಹಣ್ಣು, ಹೂವು ತರಕಾರಿಗಳು, ಸಸ್ಯಗಳ ಮಳಿಗೆಗಳಿಗೆ ಹಾಗೂ ಕೃಷಿ, ತೋಟಗಾರಿಕೆ, ಮೃಗಾಲಯ ಇತರೆ ಇಲಾಖೆಗಳ ಪ್ರಾತ್ಯಕ್ಷಿಕೆ ಕೇಂದ್ರಗಳನ್ನು ವೀಕ್ಷಿಸಿ ಮಾಹಿತಿ ಪಡೆದರು.


ಗಂಧದ ಗುಡಿ, ವಿಮಾನ ನಿಲ್ದಾಣ, ಮಕ್ಕಳ ಹೂವಿನ ಗೊಂಬೆಗಳ ಎದುರು ನಿಂತು ಛಾಯಾಚಿತ್ರ ತೆಗೆಸಿಕೊಂಡರು. ಅಧಿಕಾರಿಗಳೊಂದಿಗೆ ಫಲ, ಪುಷ್ಪ ಪ್ರದರ್ಶನದ ಪ್ರತಿ ಮಳಿಗೆಗಳಿಗೆ ಭೇಟಿ ನೀಡಿದರು.


ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಜಿ.ಪಂ ಸಿಇಒ ಪ್ರಕಾಶ್ , ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರಕಾಶ್, ಇತರೆ ಅಧಿಕಾರಿಗಳು ಇದ್ದರು.



0 Comments

Post a Comment

Post a Comment (0)

Previous Post Next Post