ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರಿ ಉದ್ಯೋಗ- ಡಿಕೆಶಿ

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರಿ ಉದ್ಯೋಗ- ಡಿಕೆಶಿ




ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.


ಸುದ್ದಿಗಾರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ಆಕ್ಸಿಜನ್ ನೀಡದೇ ಸಚಿವ ಸುಧಾಕರ್ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.


ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ ಅದು ಕೊಲೆ ಎಂದು ವಾಗ್ಧಾಳಿ ನಡೆಸಿದ್ದಾರೆ. ಇದುವರೆಗೆ ಯಾವ ಮಂತ್ರಿಯೂ ಕೂಡ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ.. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ , ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

0 Comments

Post a Comment

Post a Comment (0)

Previous Post Next Post