ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಿಡ್ನಿಗೆ ಸಂಬಂಧಿಸಿ ಆರೋಗ್ಯ ತಪಾಸಣೆ ಕಾರ್ಯಕ್ರಮ

ಕಿಡ್ನಿಗೆ ಸಂಬಂಧಿಸಿ ಆರೋಗ್ಯ ತಪಾಸಣೆ ಕಾರ್ಯಕ್ರಮ

 


ಮಡಿಕೇರಿ : ಅಮೇರಿಕಾದಲ್ಲಿ ವೈದ್ಯಕೀಯ ವೃತ್ತಿಯಲ್ಲಿರುವ ಹೆಸರಾಂತ ಕಿಡ್ನಿ ತಜ್ಞ ವೈದ್ಯರಾದ ಡಾ.ಎಂ.ಎ.ಕಾರ್ಯಪ್ಪ ಅವರು ಬುಧವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕಿಡ್ನಿಗೆ ಸಂಬಂಧಿಸಿ ಆರೋಗ್ಯ ತಪಾಸಣೆ ಮಾಡಿದರು. ನೂರಾರು ರೋಗಿಗಳು ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದರು.


ಕಿಡ್ನಿಗೆ ಸಂಬಂಧಿಸಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು. ಆರೋಗ್ಯಕ್ಕೆ ಸಂಬಂಧಿಸಿದಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.


ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಾ.ಕಾರ್ಯಪ್ಪ ಅವರು ದೇಶದಲ್ಲಿ ಇರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದರು.


ದೇಶದಲ್ಲಿ ಮೂತ್ರಪಿಂಡ ರೋಗಿಗಳ ಸಂಖ್ಯೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಮೂತ್ರಪಿಂಡಕ್ಕೆ ಸಂಬಂಧಿಸಿದಂತೆ ಹಲವು ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ ಎಂದರು.


ಕಳೆದ ಮೂರು ವರ್ಷದಲ್ಲಿ ಕೋವಿಡ್ ಕಾರಣದಿಂದಾಗಿ ಕೊಡಗು ಜಿಲ್ಲೆಗೆ ಬರಲು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಪ್ರತಿವರ್ಷ ಕೊಡಗು ಜಿಲ್ಲೆಗೆ ಆಗಮಿಸಿ ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಆರೋಗ್ಯ ಸೇವೆ ಕಲ್ಪಿಸಲಾಗುವುದು ಎಂದು ಡಾ.ಕಾರ್ಯಪ್ಪ ಅವರು ಹೇಳಿದರು.


ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ ಇತರರು ಇದ್ದರು.

0 تعليقات

إرسال تعليق

Post a Comment (0)

أحدث أقدم