ಚಿಕ್ಕಮಗಳೂರು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಧರ್ಮದೇಟು ನೀಡಿದ ಘಟನೆ ಮೂಡಿಗೆರೆ ಸಮೀಪದ ಮುದ್ರೆಮನೆ ಎಸ್ಟೇಟ್ ಬಳಿ ಭಾನುವಾರ ನಡೆದಿದೆ.
ಬೈಕ್ ನಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಯುವಕನನ್ನ ಬಜರಂಗದಳ ಕಾರ್ಯಕರ್ತರು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.
ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
إرسال تعليق