ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು



ಮಡಿಕೇರಿ: ವಿವಾಹಿತ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆಯೊಂದು ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿಗಳಾದ ಯೇಸುದಾಸ್ ಹಾಗೂ ತಾರ ದಂಪತಿ ಪುತ್ರ ರಕ್ಷಿತ್ ಎಂಬವರ ಪತ್ನಿ ಕಾವ್ಯ (23) ಮೃತಪಟ್ಟ ಮಹಿಳೆಯಾಗಿದ್ದಾರೆ.

ರಕ್ಷಿತ್ ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದಾಗ ಕಾವ್ಯ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 

ನಾಲ್ಕು ವರ್ಷಗಳ ಹಿಂದೆ ರಕ್ಷಿತ್ ಹಾಗೂ ಕಾವ್ಯ ಪ್ರೇಮ ವಿವಾಹವಾಗಿದ್ದರೆನ್ನಲಾಗಿದ್ದು, ಮಕ್ಕಳಿರಲಿಲ್ಲ ಎಂದು ತಿಳಿದು ಬಂದಿದೆ.

ಮೃತಳ ತಂದೆ, ಅರ್ಜಿ ಗ್ರಾ.ಪಂ ವ್ಯಾಪ್ತಿಯ ಕಿರುಮಕ್ಕಿ ಗ್ರಾಮದ ನಿವಾಸಿ ವಂಸತ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم