ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೊಬೈಲ್ ಬಳಕೆ ಮಾಡುತ್ತಿದ್ದ ಬಾಲಕನಿಗೆ ಪೋಷಕರ ಆಕ್ಷೇಪ; ಬಾಲಕ ನೇಣುಬಿಗಿದು ಆತ್ಮಹತ್ಯೆ

ಮೊಬೈಲ್ ಬಳಕೆ ಮಾಡುತ್ತಿದ್ದ ಬಾಲಕನಿಗೆ ಪೋಷಕರ ಆಕ್ಷೇಪ; ಬಾಲಕ ನೇಣುಬಿಗಿದು ಆತ್ಮಹತ್ಯೆ

 



ಮಂಗಳೂರು: ಮನೆಯಲ್ಲಿ ಮೊಬೈಲ್ ಬಳಕೆ ಮಾಡುವುದಕ್ಕೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದಕ್ಕೆ ಬಾಲಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಮಂಗಳೂರು ನಗರದ ಕೋಟಿಮುರ ಎಂಬಲ್ಲಿ ಜ.30ರಂದು ನಡೆದಿರುವುದಾಗಿ ವರದಿಯಾಗಿದೆ.


ನಗರದ ಪದವು ಬಿ. ಗ್ರಾಮದ ಕೋಟಿಮುರದ ನಿವಾಸಿ ಜಗದೀಶ್ ಎಂಬವರ ಪುತ್ರ, 9ನೇ ತರಗತಿಯ ವಿದ್ಯಾರ್ಥಿ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ.


ಜ್ಞಾನೇಶ್ ವಿಪರೀತವಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಬಗ್ಗೆ ಈತನ ತಾಯಿ ಗದರಿಸಿದ್ದರು. ಇದರಿಂದ ಬೇಸರಗೊಂಡ ಬಾಲಕ ಸ್ನಾನ ಮಾಡಿ ಬರುವುದಾಗಿ ರೂಮಿಗೆ ಹೋಗಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم