ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಲಬುರಗಿ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ಕಲಬುರಗಿ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

 


ಕಲಬುರಗಿ: ಜಿಲ್ಲೆಯ ಮಳಖೇಡ್ ಕ್ಕೆ ಇಂದು ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಪ್ರಧಾನ ವೇದಿಕೆ ಮುಂಭಾಗದಲ್ಲಿ ಸಂಭ್ರಮದ ಮನೆ ಮಾಡಿದೆ. 


ಡೊಳ್ಳು ಕುಣಿತ, ಕಹಳೆ ಊದಿ ಕಲಾವಿದರ ತಂಡಗಳು ಸಂಭ್ರಮಿಸುತ್ತಿವೆ.

ಕಲಬುರಗಿ ಜಿಲ್ಲೆಯ ವಿವಿದೆಡೆಯಿಂದ ಕಲಾ ತಂಡಗಳು ಬಂದಿವೆ. ಕಲಬುರಗಿಗೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಆಗಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಖಾಕಿ ಹದ್ದಿನ ಕಣ್ಣು ಇಟ್ಟಿದೆ. ವಿಮಾನ ನಿಲ್ದಾಣ ಸುತ್ತಮುತ್ತಲೂ ಪೊಲೀಸ್‌ ಸರ್ಪಗಾವಲು ಹಾಕಲಾಗಿದೆ.


ಬೆಳಗ್ಗೆ 11 ಗಂಟೆಗೆ ಆಗಮಿಸುತ್ತಿರುವ ಹಿನ್ನೆಲೆ ವಿಮಾನ ನಿಲ್ದಾಣದ ಒಳಗಡೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.

ಇನ್ನು ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ವೇದಿಕೆ ಮೇಲೆ ತಪಾಸಣೆ ನಡೆಯುತ್ತಿದೆ. ವೇದಿಕೆ ಮತ್ತು ಸುತ್ತಮುತ್ತಲಿನ ಸ್ಥಳದಲ್ಲೇ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ತಪಾಸಣೆ ನಡೆಸ್ತಿದ್ದಾರೆ.


0 تعليقات

إرسال تعليق

Post a Comment (0)

أحدث أقدم