ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜನವರಿ 23ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭ

ಜನವರಿ 23ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭ

 


ಬೆಂಗಳೂರು: ಜನವರಿ 23ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭಗೊಳ್ಳಲಿವೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, 2023ನೇ ಸಾಲಿನ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ಜನವರಿ 23 ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಫೆಬ್ರವರಿ 6ರಿಂದ 28ರವರೆಗೆ ನಡೆಯಲಿವೆ. ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 20 ರಿಂದ ಮಾರ್ಚ್ 4ರವರೆಗೆ ನಡೆಯಲಿದೆ ಎಂದು ತಿಳಿಸಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಾಗಿ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸೂಚಿಸಿದೆ.

ಪ್ರಾಯೋಗಿ ಪರೀಕ್ಷೆಗಳನ್ನು ಪ್ರತಿದಿನ ಬೆಳಿಗ್ಗೆ 9 ರಿಂದ 11 ಗಂಟೆ, ಮಧ್ಯಾಹ್ನ 12 ರಿಂದ 2 ಗಂಟೆ ಮತ್ತು 3 ರಿಂದ 5 ಗಂಟೆಯವರೆಗೆ ಬ್ಯಾಚ್ ನಂತೆ ನಡೆಸಬಹುದು ಎಂದು ತಿಳಿಸಿದೆ.

0 Comments

Post a Comment

Post a Comment (0)

Previous Post Next Post