ಬೆಂಗಳೂರು : 'ಕನ್ನಡಪ್ರಭ' ಪತ್ರಿಕೆಯ ಆರಂಭಿಕ ಸುದ್ದಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಎಚ್.ಎನ್.ಮೂರ್ತಿ (ಎಚ್.ನರಸಿಂಹಮುರ್ತಿ) ಅವರು ಸೋಮವಾರ ಬೆಳಗ್ಗೆ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಪುತ್ರಿ, ಪುತ್ರನನ್ನು ಅಗಲಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ 8.55 ಸುಮಾರಿಗೆ ಅವರು ಬೆಂಗಳೂರಿನ ವಿಜಯನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ದಿ. ಮೂರ್ತಿ ಅವರ ದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಹಾಗೂ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ತನ್ಮೂಲಕ ಮೂರ್ತಿ ಅವರು ಸಾವಿನಲ್ಲು ಸಾರ್ಥಕತೆ ಮೆರೆದಿದ್ದಾರೆ.
إرسال تعليق