ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕನಿಷ್ಠ ತಾಪಮಾನ ಇಳಿಕೆಯಾಗುತ್ತಿರುವುದರಿಂದ ಚಳಿಯ ತೀವ್ರತೆ ಹೆಚ್ಚಾಗಲಿದೆ. ಮಕರ ಸಂಕ್ರಾಂತಿ ಹಬ್ಬದವರೆಗೂ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ. ಹಗಲಿನಲ್ಲಿ ಸಾಕಷ್ಟು ಬಿಸಿಲು ಇದ್ದರೂ ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಸಂಜೆ ಹಾಗೂ ರಾತ್ರಿ ಸಮಯದಲ್ಲಿ ಚಳಿ ಹೆಚ್ಚಾಗಲಿದೆ.
ಮುಂಜಾನೆ ಬಹಳಷ್ಟು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಸಹಜವಾಗಿದೆ. ಕೆಲವೆಡೆ ದಟ್ಟ ಮಂಜು ಕವಿಯಲಿದೆ.
ಹಲವು ಕಡೆಗಳಲ್ಲಿ ಭಾಗಶಃ ಮೋಡ ಕವಿಯಲಿದೆ. ಹೀಗಾಗಿ ರಾಜ್ಯದಲ್ಲಿ ಕನಿಷ್ಠ ತಾಪಮಾನ ಸರಾಸರಿ 12ರಿಂದ 16ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗುತ್ತಿದೆ. ಗರಿಷ್ಠ ತಾಪಮಾನವು 26ರಿಂದ 29 ಡಿಗ್ರಿ ಸೆಲ್ಸಿಯಸ್ವರೆಗೂ ದಾಖಲಾಗುತ್ತಿದೆ.
ರಾಜ್ಯದಲ್ಲಿ ಈ ಬಾರಿಯ ಮುಂಗಾರು ಹಾಗೂ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದು, ವಾತಾವರಣದಲ್ಲಿ ತೇವಾಂಶವೂ ಆಧಿಕವಾಗಿದೆ. ಬಹಳಷ್ಟು ಕಡೆ ಬೆಳಗಿನ ಜಾವ ಸಾಕಷ್ಟು ಇಬ್ಬನಿಯೂ ಬೀಳುತ್ತಿದೆ.
ಕಳೆದ ಬಾರಿಯಂತೆ ಈ ಬಾರಿಯೂ ಡಿಸೆಂಬರ್ ವರೆಗೂ ಮಳೆ ಮುಂದುವರೆದಿದೆ. ಇದರಿಂದಾಗಿ ಜನವರಿಯಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಮಕರ ಸಂಕ್ರಾಂತಿ ಹಬ್ಬದ ವರೆಗೂ ಮಾಗಿಯ ಚಳಿಯ ತೀವ್ರತೆ ಹೆಚ್ಚಾಗಿರಲಿದೆ.
ಆ ನಂತರ ಚಳಿಯ ಪ್ರಮಾಣ ಇಳಿಕೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
إرسال تعليق