ಬೀದರ್ : ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ ಬೀದರ್ ಮತ್ತು ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ಜ. 7 ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಭೂಮರೆಡ್ಡಿ ಕಾಲೇಜು ಆವರಣ, ಬೀದರ್ ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9480842995, 9008736661, 9071000027 ಕರೆ ಮಾಡಬಹುದು.
ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್ಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ, ನೌಬಾದ ಬೀದರ್ ಇವರನ್ನು ಸಂಪರ್ಕಿಸಬಹುದಾಗಿದೆ.
إرسال تعليق