ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಸಾಹಿತಿ, ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು

ಹಿರಿಯ ಸಾಹಿತಿ, ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು

 


ದಾವಣಗೆರೆ: ಹಿರಿಯ ಸಾಹಿತಿ, ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಬಂಡಾಯ ಸಾಹಿತ್ಯ ವೇದಿಕೆಯ ಕಾರ್ಯಕ್ರಮದಲ್ಲಿ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಕಾರ್ಯಕ್ರಮ ನಡೆಯುವಾಗಲೇ ಘಟನೆ ನಡೆದಿದೆ.
ತಕ್ಷಣ ಅಕ್ಷಯ ಆಸ್ಪತ್ರೆಗೆ ದಾಖಲಿಸಿ ಬರಗೂರು ರಾಮಚಂದ್ರಪ್ಪನವರಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಭಾಷಣದ ನಂತರ ಬರಗೂರು ರಾಮಚಂದ್ರಪ್ಪ ಅವರಿಗೆ ರಕ್ತದೊತ್ತಡ ಹೆಚ್ಚಾಗಿದೆ. ಚಿಕಿತ್ಸೆ ನಂತರ  ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆರಾಮಾಗಿದ್ದಾರೆ.

0 Comments

Post a Comment

Post a Comment (0)

Previous Post Next Post