ಬೆಳ್ಳಾರೆ: ಇಲ್ಲಿನ ಕೆಳಗಿನ ಪೇಟೆಯಲ್ಲಿ ಡಾ| ಕಾವ್ಯಾ ಜೆ.ಎಚ್ ರವರ ವೇದಾಮೃತ ಚಿಕಿತ್ಸಾಲಯದಲ್ಲಿ ಜ.15 ರ ಭಾನುವಾರದಂದು ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST) ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಶ್ರೀಯುತ ಪ್ರದೀಪ್ ಕುಮಾರ್ ರೈ ಪನ್ನೆ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಶುಭಹಾರೈಸಿದರು.
ಈ ಶಿಬಿರ ಕಾರ್ಯಕ್ರಮವು ಬೆಳಗ್ಗೆ 10ಕ್ಕೆ ಆರಂಭಗೊಂಡಿದ್ದು ಸಂಜೆ 3 ಗಂಟೆಯವರೆಗೆ ನಡೆಯಿತು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಸದುಪಯೋಗ ಪಡೆದುಕೊಂಡರೆಂದು ವೇದಾಮೃತ ಚಿಕಿತ್ಸಾಲಯ ಡಾ.ಕಾವ್ಯಾ ಜೆ.ಎಚ್. ತಿಳಿಸಿದ್ದಾರೆ.
Post a Comment