ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕ್ರಮ

ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕ್ರಮ

 


ಬೆಂಗಳೂರು: ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕ್ರಮ ಫೆ. 1 ರಿಂದಲೇ ಜಾರಿಯಾಗಿದೆ. ಈ ಕ್ರಮಕ್ಕೆ ಬೆಂಬಲ ಸೂಚಿಸಿ ಸಹಕರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.


ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕ. ಆದ್ದರಿಂದ ಕೇಂದ್ರ ಸರ್ಕಾರವು ಪ್ಲಾಸ್ಟಿಕ್ ವೇಸ್ಟ್ (ಮ್ಯಾನೇಜ್ಮೆಂಟ್ ಮತ್ತು ಹ್ಯಾಡ್ಲಿಂಗ್) 2011 ಹಾಗೂ ತಿದ್ದುಪಡಿ ನಿಯಮಗಳು 2016 ರ ಮೂಲಕ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ಹೆಚ್ಚು ನಿರ್ಬಂಧಗಳನ್ನು ಹೇರಿದೆ. 


ಇದನ್ನು ಅನುಸರಿಸಿ ರಾಜ್ಯ ಸರ್ಕಾರವು ಪ್ಲಾಸ್ಟಿಕ್ ಬ್ಯಾಗ್ ಹಾಗೂ ಇತರೆ ಉತ್ಪನ್ನಗಳ ಬಳಕೆ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದೆ.

0 Comments

Post a Comment

Post a Comment (0)

Previous Post Next Post