ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆ ಆಗಿದ್ದು, ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ.
ಕಳೆದೆರಡು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಕ್ಷಯ್ ಶ್ರೀಧರ್ ಅವರು ಕಾರ್ಯನಿರ್ವಹಿಸಿದ್ದರು. ಇದೀಗ ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಆದ ಅಕ್ಷಯ್ ಶ್ರೀಧರ್ ಅವರನ್ನು ವರ್ಗಾವಣೆಗೊಳಿಸಿವಂತೆ ಸರಕಾರ ಆದೇಶ ಹೊರಡಿಸಿದೆ. ಹಾಗಾಗಿ ಈ ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ ಅವರನ್ನು ನೇಮಕ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಆಗಸ್ಟ್ 2020 ರಂದು ಬೀದರ್ ಉಪ ವಿಭಾಗದ ಅಸಿಸ್ಟೆಂಟ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಕ್ಷಯ್ ಶ್ರೀಧರ್ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಮೀಷನರ್ ಆಗಿ ನೇಮಕ ಮಾಡಲಾಗಿತ್ತು.
ಅಲ್ಲಿಂದ ಇಲ್ಲಿಯವರೆಗೆ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದು, ಇಂದು (ಫೆಬ್ರವರಿ 2)ರಂದು ಅವರ ಜಾಗಕ್ಕೆ ಚನ್ನಬಸಪ್ಪ ಕೆ ಅವರನ್ನು ನೇಮಕ ಮಾಡಲಾಗಿದೆ.
إرسال تعليق