ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು: ಅಕ್ರಮ ಚಿನ್ನ ಸಾಗಣೆಯ ಪ್ರತ್ಯೇಕ ಪ್ರಕರಣ – 90 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು: ಅಕ್ರಮ ಚಿನ್ನ ಸಾಗಣೆಯ ಪ್ರತ್ಯೇಕ ಪ್ರಕರಣ – 90 ಲಕ್ಷ ರೂ. ಮೌಲ್ಯದ ಚಿನ್ನ ವಶ


ಪ್ರಾತಿನಿಧಿಕ ಚಿತ್ರ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 90 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ ಕಳ್ಳಸಾಗಣೆ ಕೃತ್ಯಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇವುಗಳು ಜನವರಿ 19ರಿಂದ 31ರ ವರೆಗೆ ವಿವಿಧ ದಿನಗಳಲ್ಲಿ ನಡೆದ ಪ್ರಕರಣಗಳಾಗಿವೆ.

ಪ್ಯಾಂಟ್ ಹುಕ್ಸ್, ಬಾಬಾ ಸೂಟ್ ಬಟನ್, ಟ್ರಾಲಿ ಬ್ಯಾಗ್ ಮತ್ತು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಅಕ್ರಮವಾಗಿ ಚಿನ್ನ ಸಾಗಣೆ ಮಾಡಲಾಗುತ್ತಿತ್ತು.

ಜನವರಿ 19 ರಿಂದ 31 ರವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರೆಟ್ ಶುದ್ದತೆಯ 1617.0 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 90,34,970 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.

ದುಬೈನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದು, ಪ್ಯಾಂಟ್, ಮಕ್ಕಳ ಅಂಗಿಯ ಬಟನ್, ಟ್ರಾಲಿ ಬ್ಯಾಗ್‌ನ ಬೀಡಿಂಗ್‌ ಪದರದಲ್ಲಿ ಸೇರಿದಂತೆ ಗುದನಾಳದಲ್ಲಿ ಚಿನ್ನ ಇಟ್ಟು ಸಾಗಣೆ ಮಾಡುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿಗಳ ವಿಚಾರಣೆ ನಡೆಸಿದ್ದಾರೆ.

ಇದಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಮತ್ತೋರ್ವ ಪ್ರಯಾಣಿಕನ ಬಳಿಯಿಂದ 6,42,740 ರೂ. ಮೌಲ್ಯದ ಸಿಗರೇಟ್ ಹಾಗೂ ಇ-ಸಿಗರೇಟ್ ವಶಪಡಿಸಿಕೊಳ್ಳಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم