ಬೆಂಗಳೂರು : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್, ಶೇ. 15 ರಷ್ಟು ಪ್ರವೇಶ ಶುಲ್ಕ ಏರಿಕೆಗೆ ಖಾಸಗಿ ಶಾಲೆಗಳು ನಿರ್ಧಾರ ಕೈಗೊಂಡಿವೆ.
ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಪ್ರಮುಖ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ಪೋಷಕರು ಹೆಚ್ಚಿನ ಶುಲ್ಕ ಕಟ್ಟಬೇಕಾಗಿದೆ.
2023-24ನೇ ಸಾಲಿನಲ್ಲಿ ಖಾಸಗಿ ಶಾಲೆಗಳ ಪ್ರವೇಶ ಶುಲ್ಕವನ್ನು ಶೇ. 5 ರಿಂದ 15 ರಷ್ಟು ಹೆಚ್ಚಿಸಲು ಕ್ಯಾಮ್ಸ್ ಸೇರಿದಂತೆ ವಿವಿಧ ಖಾಸಗಿ ಶಾಲಾ ಸಂಘಟನೆಗಳು ನಿರ್ಧರಿಸಿವೆ.
ರಾಜ್ಯದಲ್ಲಿ ಸುಮಾರು 4 ಸಾವಿರ ಸದಸ್ಯ ಶಾಲೆಗಳನ್ನು ಹೊಂದಿರುವ ಕರ್ನಾಟಕ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಶೇ. 10 ರಿಂದ 15 ರಷ್ಟು ಪ್ರವೇಶ ಶುಲ್ಕವನ್ನು ಹೆಚ್ಚಿಸಲು ತನ್ನ ಸದಸ್ಯ ಶಾಲೆಗಳಿಗೆ ಸಲಹೆ ನೀಡಿದೆ ಎನ್ನಲಾಗಿದೆ.
إرسال تعليق